ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

Sampriya

ಭಾನುವಾರ, 3 ಆಗಸ್ಟ್ 2025 (15:55 IST)
Photo Credit X
ಗೊಂಡಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭಾನುವಾರ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನವು ಕಾಲುವೆಗೆ ಬಿದ್ದ ಪರಿಣಾಮ ಕನಿಷ್ಠ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ. 

ಇತಿಯಾ ಥೋಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಅಧಿಕೃತ ಮಾಹಿತಿ ಪ್ರಕಾರ, ಗೊಂಡಾದ ಇಟಿಯಾ ಥೋಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಹನ ಕಾಲುವೆಗೆ ಬಿದ್ದಿದೆ. ವಾಹನದಲ್ಲಿ ಒಟ್ಟು 15ಮಂದಿ ಇದ್ದು, ಅದರಲ್ಲಿ 11ಮಂದಿ ಸಾವನ್ನಪ್ಪಿದ್ದಾರೆ. ಅವರೆಲ್ಲರೂ ಪ್ರಾರ್ಥನೆ ಸಲ್ಲಿಸಲು ಪೃಥ್ವಿನಾಥ ದೇವಸ್ಥಾನಕ್ಕೆ ಹೋಗುತ್ತಿದ್ದರು. 


ಸಿಎಂಒ ಹೇಳಿಕೆಯಂತೆ, ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಾಚರಣೆಯನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆಯೂ ಅವರು ನಿರ್ದೇಶನ ನೀಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ