ಉತ್ತರಪ್ರದೇಶದಲ್ಲಿ ಅಖಿಲೇಶ್, ಮಾಯಾವತಿ ಸರಕಾರ?

ಗುರುವಾರ, 9 ಮಾರ್ಚ್ 2017 (19:45 IST)
ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಮೈತ್ರಿ ಸರಕಾರ ರಚಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.  
 
ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಮತ್ತು ರಾಜ್ಯದ ಅಭಿವೃದ್ಧಿಗಾಗಿ ಮಾಜಿ ಸಿಎಂ ಮಾಯಾವತಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಅಖಿಲೇಶ್ ತಿಳಿಸಿದ್ದಾರೆ. 
 
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಏಕೈಕ ಉದ್ಧೇಶದಿಂದ ಎಸ್‌ಪಿ- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಮೈತ್ರಿಕೂಟವನ್ನು ಗೆಲ್ಲಿಸುವಂತೆ ಮತದಾರರಲ್ಲಿ ಕೋರಿದ್ದರು.
 
ಬಹುಜನ ಸಮಾಜದ ಮುಖ್ಯಸ್ಥೆ ಮಾಯಾವತಿ ನೇತೃತ್ವದ ಬಿಎಸ್‍ಪಿ ಮಾತ್ರ ಯಾವ ಪಕ್ಷದೊಂದಿಗೆ ಮೈತ್ರಿಯಾಗದೆ ಏಕಾಂಗಿಯಾಗಿ ಕಣಕ್ಕಿಳಿದಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ