ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ
ಲೋಕಸಭೆ ಕಲಾಪ ಆರಂಭವಾದ ಬೆನ್ನಲ್ಲೇ ಜಗದೀಪ್ ಧನ್ಕರ್ ತಮ್ಮ ಸ್ಥಾನಕ್ಕೆ ದಿಡೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಅನಾರೋಗ್ಯದಿಂದಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಆದರೆ ಇದರ ಹಿಂದೆ ಬೇರೆಯೇ ಕಾರಣಗಳಿರಬಹುದೇ ಎಂದು ವಿಶ್ಲೇಷಿಸಲಾಗುತ್ತಿದೆ.
ಈ ಬಗ್ಗೆ ಕಾಂಗ್ರೆಸ್ ವಕ್ತಾರ ಜೈ ರಾಮ್ ರಮೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ. ಜಗದೀಪ್ ಧನ್ಕರ್ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗಿದ್ದು ಸರಿಯಾಗಿಯೇ ಇದೆ. ಆದರೆ ಅವರ ರಾಜೀನಾಮೆಗೆ ಆರೋಗ್ಯವೇ ಕಾರಣ ಎಂದು ಅನಿಸುತ್ತಿಲ್ಲ. ಕಣ್ಣಿಗೆ ಕಾಣದ ಬೇರೇನೋ ಕಾರಣವಿದೆ ಎನಿಸುತ್ತಿದೆ. ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು. ನಿನ್ನೆ ಸಂಜೆಯೂ ಅವರ ಜೊತೆ ಮಾತನಾಡಿದ್ದೆ. ಅವರ ನಿರ್ಧಾರ ಅಚ್ಚರಿಯಾಗುತ್ತಿದೆ ಎಂದಿದ್ದಾರೆ.
ಕೆಲವೇ ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು ಸೂಕ್ತ ಸಮಯದಲ್ಲೇ ನಿವೃತ್ತಿಯಾಗುತ್ತೇನೆ. 2027 ರ ವೇಳೆಗೆ ನಿವೃತ್ತಿಯಾಗಲಿದ್ದೇನೆ ಎಂದಿದ್ದರು. ಆದರೆ ಈಗ ದಿಡೀರ್ ರಾಜೀನಾಮೆ ನೀಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.