ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಆರೋಗ್ಯದಲ್ಲಿ ದಿಢೀರ್ ಏರುಪೇರು: ಏಮ್ಸ್‌ ಆಸ್ಪತ್ರೆಗೆ ದಾಖಲು

Sampriya

ಭಾನುವಾರ, 9 ಮಾರ್ಚ್ 2025 (12:47 IST)
Photo Courtesy X
ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರನ್ನು ಇಂದು ಮುಂಜಾನೆ ರಾಷ್ಟ್ರ ರಾಜಧಾನಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೃದ್ರೋಗ ವಿಭಾಗಕ್ಕೆ ದಾಖಲಿಸಲಾಗಿದೆ.

ರಾಜ್ಯಸಭೆಯ ಸಭಾಪತಿಯೂ ಆಗಿರುವ ಜಗದೀಪ್ ಧನಕರ್‌ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

73 ವರ್ಷದ ಜಗದೀಪ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಅಸ್ವಸ್ಥರಾದ ಕಾರಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಧನಕರ್‌ ಅವರ ಆರೋಗ್ಯ ಇದೀಗ ಸ್ಥಿರವಾಗಿದೆ.

ಧನಕರ್‌ ಅವರನ್ನು ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜೀವ್ ನಾರಂಗ್ ಅವರ ನೇತೃತ್ವದಲ್ಲಿ ವೈದ್ಯರ ತಂಡ ಮೇಲ್ವಿಚಾರಣೆ ಮಾಡುತ್ತಿದೆ ಎಂದು ತಿಳಿದು ಬಂದಿದೆ.

ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಧನಕರ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ