ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಏಮ್ಸ್ ಆಸ್ಪತ್ರೆಗೆ ದಾಖಲು
ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ನಿನ್ನೆ(ಅ.20) ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಯಾರೂ ಗಾಬರಿ ಪಡುವ ಅಗತ್ಯವಿಲ್ಲ. ತಪಾಸಣೆಗಾಗಿ ವೆಂಕಯ್ಯ ದಾಖಲಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನಿನ್ನೆ ಸಂಜೆ ವೆಂಕಯ್ಯರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಲವಲವಿಕೆಯಿಂದಿದ್ದಾರೆ. ಯಾವುದೇ ಆತಂಕ ಬೇಡ ಎಂದು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.