ಆಗಸ್ಟ್‌ 6ರಂದು ಉಪ ರಾಷ್ಟ್ರಪತಿ ಚುನಾವಣೆ!

ಬುಧವಾರ, 29 ಜೂನ್ 2022 (17:19 IST)

ಉಪ ರಾಷ್ಟ್ರಪತಿ ಚುನಾವಣೆ ಆಗಸ್ಟ್‌ 6ರಂದು ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

ಕೇಂದ್ರ ಚುನಾವಣಾಧಿಕಾರಿ ಬುಧವಾರ ಈ ವಿಷಯ ಪ್ರಕಟಿಸಿದ್ದು, ಉಪ ರಾಷ್ಟ್ರಪತಿ ಚುನಾವಣೆ ಅಗತ್ಯ ಬಿದ್ದರೆ ಆಗಸ್ಟ್‌ 6 ರಂದು ಬೆಳಿಗ್ಗೆ 10 ಗಂಟೆಯಿಂದ ೫ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಜುಲೈ 5ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಜುಲೈ 19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 20ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 22ರಂದು ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ