ಚಂದ್ರನ ಮೇಲೆ ಮತ್ತೊಮ್ಮೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್

ಮಂಗಳವಾರ, 5 ಸೆಪ್ಟಂಬರ್ 2023 (08:18 IST)
ನವದೆಹಲಿ : ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ 10 ದಿನಗಳ ನಂತರ, ಚಂದ್ರಯಾನ -3 ಲ್ಯಾಂಡರ್ ಕೆಲವು ಸೆಕೆಂಡುಗಳ ಕಾಲ ಚಂದ್ರನ ಮೇಲ್ಮೈಯಲ್ಲಿ ಪ್ರಾಯೋಗಿಕವಾಗಿ ಸ್ವಲ್ಪ ಎತ್ತರಕ್ಕೆ ಹಾರಾಟ ನಡೆಸಿ ಮತ್ತೆ ಸಾಫ್ಟ್ ಲ್ಯಾಂಡಿಂಗ್ ಮಾಡಿದೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ವಿಕ್ರಮ್ ಲ್ಯಾಂಡರ್ ತನ್ನ ಮಿಷನ್ ಉದ್ದೇಶಗಳನ್ನು ಮೀರಿದೆ. ಇದು ಹಾಪ್ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿತು.

ಆಜ್ಞೆಯ ಮೇರೆಗೆ ಎಂಜಿನಿಗಳ ಸಹಾಯದಿಂದ ಮೇಲಕ್ಕೆ ಹಾರಿಸಲಾಯಿತು. ನಿರೀಕ್ಷೆಯಂತೆ ಸುಮಾರು 40 ಸೆಂ.ಮೀ ಎತ್ತರಕ್ಕೆ ಹಾರಿಸಿ, 30 – 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ