ಭಾನುವಾರದಂದು ಹುಲಿ 50 ವರ್ಷದ ವ್ಯಕ್ತಿಯ ಮೇಲೆ ದಾಳಿ ಮಾಡಿದೆ. ಆಗ ಹುಲಿ ಅಭಯಾರಣ್ಯದ ಸಿಬ್ಬಂದಿಗಳು ಆತನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಕಾರ್ಯನಿರತರಾಗಿದ್ದ ವೇಳೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಸುತ್ತುವರಿದು ಆ ಹುಲಿಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಂದಿದ್ದಾರೆ.
ಅಭಯಾರಣ್ಯ ಪ್ರದೇಶದಲ್ಲಿ ಹುಲಿ ಹತ್ಯೆ ಮಾಡುವುದು ಗಂಭೀರ ಅಪರಾಧವಾಗಿದ್ದರಿಂದ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಹಾಗೇ ಹುಲಿಯನ್ನು ಹತ್ಯೆ ಮಾಡುವಲ್ಲಿ ಯಾರೆಲ್ಲಾ ಭಾಗಿಯಾದ್ದರೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ದುಧ್ವಾ ಹುಲಿ ಅಭಯಾರಣ್ಯ ನಿರ್ದೇಶಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.