ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಕೈ, ಕಮಲ ಅಧ್ಯಕ್ಷರ ಸ್ಪಷ್ಟನೆ ಕೇಳಿದ ಚುನಾವಣಾ ಆಯೋಗ
ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಸಂವಿಧಾನದ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಹುಲ್ ಗಾಂಧಿ ಹೇಳಿಕೆಗಳು ರಾಜ್ಯಗಳ ನಡುವೆ ವೈಷಮ್ಯವನ್ನು ಬಿತ್ತುವ ಉದ್ದೇಶವನ್ನು ಹೊಂದಿವೆ ಎಂದು ಬಿಜೆಪಿ ಆರೋಪಿಸಿದೆ.