ಅದಾನಿ ವಿಚಾರದಲ್ಲಿ ತೀವ್ರವಾದ ಪ್ರತಿಪಕ್ಷಗಳ ಪ್ರತಿಭಟನೆ

ಮಂಗಳವಾರ, 7 ಫೆಬ್ರವರಿ 2023 (08:30 IST)
ನವದೆಹಲಿ : ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಮಧ್ಯಾಹ್ನ ಎರಡು ಗಂಟೆಗೆ ಮುಂದೂಡಿಕೆಯಾಗಿದೆ. ಅದಾನಿ ವಿಚಾರದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ತೀವ್ರವಾದ ಹಿನ್ನಲೆ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ.

ಸದನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಿದ ವಿಪಕ್ಷಗಳು ಸಂಸತ್ತಿನ ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ಅದಾನಿ ಪ್ರಕರಣ ತನಿಖೆಯಾಗಬೇಕು ಮತ್ತು ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ