ವಿವೋ : ED ತನಿಖೆ ವೇಳೆ ಅಕ್ರಮ ಬಯಲು

ಶುಕ್ರವಾರ, 8 ಜುಲೈ 2022 (09:58 IST)
ನವದೆಹಲಿ : ಚೀನಾ ಮೂಲದ ಮೊಬೈಲ್ ತಯಾರಿಕಾ ಸಂಸ್ಥೆ ವಿವೋ ತೆರಿಗೆ ಪಾವತಿಯಿಂದ ತಪ್ಪಿಸಿಕೊಳ್ಳಲು ತನ್ನ ಕಂಪನಿ ವಹಿವಾಟಿನ ಶೇ.50 ಪ್ರತಿಶತದಷ್ಟು ಅಂದರೆ,

ಸುಮಾರು 62,476 ಕೋಟಿ ಹಣವನ್ನು ಚೀನಾಕ್ಕೆ ಕಳುಹಿಸಿಕೊಟ್ಟಿದೆ ಎಂದು ಜಾರಿ ನಿರ್ದೇಶನಾಲಯ (ED) ತಿಳಿಸಿದೆ.

ಚೀನಾ ಮೂಲದ ಮೊಬೈಲ್ ತಯಾರಿಕಾ ಸಂಸ್ಥೆಯ ತೆರಿಗೆ ವಂಚನೆ ಬಯಲಾಗಿದ್ದು, ಭಾರತದಲ್ಲಿ ತೆರಿಗೆ ಪಾವತಿಸಲು ತಪ್ಪಿಸುವುದಕ್ಕಾಗಿ ಬರೋಬ್ಬರಿ ಶೇ.50ರಷ್ಟು ತೆರಿಗೆ ಹಣವನ್ನು ಚೀನಾಗೆ ರವಾನಿಸಿದೆ.

ವಿವೊ ಮೊಬೈಲ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಹಾಗೂ ಇದರ ಸಹಭಾಗಿಯಾಗಿರುವ ವಿವಿಧ 23 ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ ಕಳೆದ ಎರಡು ದಿನಗಳ ಹಿಂದೆ ದಾಳಿ ಮಾಡಿತ್ತು. ಇದೀಗ ಶೇ.50 ರಷ್ಟು ಅಂದರೆ ಬರೋಬ್ಬರಿ 62, 476ಕೋಟಿ ರೂ. ಹಣವನ್ನು ಚೀನಾಗೆ ರವಾನಿಸಿರುವುದು ಬಯಲಾಗಿದೆ. 

ಸಂಸ್ಥೆಯ ವಿವಿಧ ಬ್ಯಾಂಕ್ಗಳ 119 ಖಾತೆಗಳಲ್ಲಿ ಇರಿಸಿದ್ದ ಸುಮಾರು 465 ಕೋಟಿ ರೂ. ನಗದು ಹಣ ಹಾಗೂ 2 ಕೆ.ಜಿ. ಚಿನ್ನದ ಬಿಸ್ಕೆಟ್ಗಳನ್ನೂ ಜಪ್ತಿ ಮಾಡಲಾಗಿದೆ. 2018ರಲ್ಲೇ ವಿವೋದ ಇಬ್ಬರು ನಿರ್ದೇಶಕರು ದೇಶ ತೊರೆದಿರುವುದು ಬೆಳಕಿಗೆ ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ