ಸಂಪುಟ ವಿಸ್ತರಣೆ ಹಿನ್ನಲೆ; ಇಂದು ಸಿಎಂ ಯಡಿಯೂರಪ್ಪ ರಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ

ಶುಕ್ರವಾರ, 16 ಆಗಸ್ಟ್ 2019 (10:45 IST)
ಬೆಂಗಳೂರು : ರಾಜ್ಯ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅಧಿಕಾರ ಸ್ವೀಕರಿಸಿ 20 ದಿನಗಳೇ ಕಳೆದಿದ್ದರೂ ಸಂಪುಟ ರಚನೆಯಾಗಿಲ್ಲ. ಈ ಬಗ್ಗೆ ವಿರೋಧಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ನಿನ್ನೆ ದೆಹಲಿಗೆ ತೆರಳಿರುವ ಯಡಿಯೂರಪ್ಪ ಇಂದು ರಾಜ್ಯ ಸಂಪುಟ ವಿಸ್ತರಣೆಯ ಬಗ್ಗೆ ಪ್ರಧಾನಿಯ ಜೊತೆ ಚರ್ಚಿಸಲಿದ್ದಾರೆ.


ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದರ ಜೊತೆಗೆ ರಾಜ್ಯಕ್ಕೆ ಹೆಚ್ಚುವರಿ ಅನುದಾನ ನೀಡುವಂತೆಯೂ ಮನವಿ ಮಾಡಲಿದ್ದಾರೆ. ಹಾಗೇ ನಾಳೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ