ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’

ಭಾನುವಾರ, 27 ಆಗಸ್ಟ್ 2023 (09:32 IST)
ನವದೆಹಲಿ : ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ ವ್ಯೋಮಿತ್ರ ಹೆಸರಿನ ಮಹಿಳಾ ರೋಬೋಟ್‌ ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಖಾಸಗಿ ವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾಹ್ಯಾಕಾಶ ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ ಎಂದು ತಿಳಿಸಿದರು.

ಮಹಿಳಾ ರೋಬೋಟ್ ಎಲ್ಲಾ ಮಾನವ ಚಟುವಟಿಕೆಗಳನ್ನು ಅನುಕರಿಸಲಿದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ನಾವು ಈ ಯೋಜನೆಯಲ್ಲಿ ಮುಂದುವರಿಯಬಹುದು ಎಂದು ಹೇಳಿದರು.

2019 ರವರೆಗೆ ಮುಚ್ಚಿದ್ದ ಶ್ರೀಹರಿಕೋಟಾದ ಗೇಟ್‌ಗಳನ್ನು ಈಗ ತೆರೆಯಲಾಗಿದೆ. ಈಗ ಮಾಧ್ಯಮಗಳನ್ನು ಮತ್ತು ಶಾಲಾ ಮಕ್ಕಳನ್ನು ಆಹ್ವಾನಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಾಹ್ಯಾಕಾಶ ಕ್ಷೇತ್ರವನ್ನು ಎಲ್ಲರಿಗೂ ಈಗ ತೆರೆದಿದ್ದಾರೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ