ಆರೆಸ್ಸೆಸ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ

ಸೋಮವಾರ, 1 ಫೆಬ್ರವರಿ 2016 (16:24 IST)
ಆರೆಸ್ಸೆಸ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ತೋರಿದ ದೌರ್ಜನ್ಯದ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. 
 
ದಲಿತ ಸಂಶೋಧನಾ ವಿದ್ಯಾರ್ಥಿಯಾದ ರೋಹಿತ್ ವೆಮುಲಾ ಆತ್ಮಹತ್ಯೆ ವಿರೋಧಿಸಿ ಆಲ್ ಇಂಡಿಯಾ ಸ್ಟುಡೆಂಟ್ಸ್ ಅಸೋಸಿಯೇಶನ್ ಸಂಘಟನೆಯ ವಿದ್ಯಾರ್ಥಿಗಳು ಜನೆವರಿ 30 ರಂದು ನಡೆದ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ಥಳಿಸುತ್ತಿರುವದು ವಿಡಿಯೋದಲ್ಲಿ ಬಹಿರಂಗವಾಗಿದೆ.
 
ಪ್ರತಿಭಟನೆಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಚದುರಿಸಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ಕೂಡಾ ಹಲ್ಲೆ ನಡೆಸಿರುವುದು ವ್ಯಾಪಕ ಖಂಡನೆಗೆ ಕಾರಣವಾಗಿದೆ. 
 
ಸಾದಾ ಸಮವಸ್ತ್ರದಲ್ಲಿದ್ದ ವ್ಯಕ್ತಿಗಳು ಕೂಡಾ ವಿದ್ಯಾರ್ಥಿಗಳ ವಿರುದ್ಧ ಅಸಭ್ಯ ವರ್ತನೆ ತೋರಿರುವುದು ಕಂಡು ಬಂದಿದೆ. ಸಾಧಾ ಸಮವಸ್ತ್ರದಲ್ಲಿದ್ದ ವ್ಯಕ್ತಿಗಳು ಪೊಲೀಸರೇ ಎನ್ನುವುದು ಖಚಿತವಾಗಿಲ್ಲ. ಆದರೆ, ಸಾದಾ ಸಮವಸ್ತ್ರದಲ್ಲಿದ್ದ ವ್ಯಕ್ತಿಗಳು ಆರೆಸ್ಸೆಸ್ ಬೆಂಬಲಿಗರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
 
ಕೆಲ ವರದಿಗಳು ಪ್ರಕಾರ ವಿದ್ಯಾರ್ಥಿಗಳು ಪೊಲೀಸ್ ಬ್ಯಾರಿಕೇಡ್ ಮುರಿದ ನಂತರ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ