ಬಿಹಾರದಲ್ಲಿ ಜಲದುರಂತ: ಪವಿತ್ರಾ ಸ್ನಾನದ ವೇಳೆ 43 ಮಂದಿ ದುರ್ಮರಣ

Sampriya

ಗುರುವಾರ, 26 ಸೆಪ್ಟಂಬರ್ 2024 (18:51 IST)
ನವದೆಹಲಿ: ಬಿಹಾರದಲ್ಲಿ ನಡೆದ 'ಜೀವಿತ್ಪುತ್ರಿಕ' ಹಬ್ಬದ ಸಂದರ್ಭದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನದಿ ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುವ ವೇಳೆ 43 ಜನರು ಸಾವನ್ನಪ್ಪಿ , ಮೂವರು ನಾಪತ್ತೆಯಾಗಿರುವ ದುರ್ಘಟನೆ ಬುಧವಾರ ನಡೆದಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿ, ಬುಧವಾರ ನಡೆದ ಉತ್ಸವದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಈ ಘಟನೆಗಳು ಸಂಭವಿಸಿವೆ. 'ಜೀವಿಪುತ್ರಿಕಾ' ಹಬ್ಬದ ಸಂದರ್ಭದಲ್ಲಿ ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಉಪವಾಸ ಮಾಡುತ್ತಾರೆ. ದುರ್ಘಟನೆಯಲ್ಲಿ ಇದುವರೆಗೆ ಒಟ್ಟು 43 ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಹೆಚ್ಚಿನ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ (ಡಿಎಂಡಿ) ಹೊರಡಿಸಿದ ಹೇಳಿಕೆ ತಿಳಿಸಿದೆ.

ಪೂರ್ವ ಮತ್ತು ಪಶ್ಚಿಮ ಚಂಪಾರಣ್, ನಳಂದಾ, ಔರಂಗಾಬಾದ್, ಕೈಮೂರ್, ಬಕ್ಸರ್, ಸಿವಾನ್, ರೋಹ್ತಾಸ್, ಸರನ್, ಪಾಟ್ನಾ, ವೈಶಾಲಿ, ಮುಜಾಫರ್‌ಪುರ, ಸಮಸ್ತಿಪುರ್, ಗೋಪಾಲ್‌ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ಮುಳುಗಿದ ಘಟನೆಗಳು ವರದಿಯಾಗಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ