ಯುದ್ಧ ವಿಚಾರದಲ್ಲಿ ಭಾರತದ ನಿಲುವಿಗೆ ನಮ್ಮ ಸಹಮತ ಇದೆ : ರಾಹುಲ್ ಗಾಂಧಿ

ಶನಿವಾರ, 9 ಸೆಪ್ಟಂಬರ್ 2023 (12:42 IST)
ಬ್ರಸೆಲ್ಸ್ : ಉಕ್ರೇನ್ ಮೇಲೆ ರಷ್ಯಾ ಯುದ್ಧ ನಡೆಸುತ್ತಿರುವ ವಿಚಾರದಲ್ಲಿ ಭಾರತದ ನಿಲುವನ್ನು ವಿಪಕ್ಷಗಳ ಒಕ್ಕೂಟ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಆಯೋಜಿಸಿರುವ ಯೂರೋಪ್ ಪ್ರವಾಸದಲ್ಲಿದ್ದಾರೆ. ಬ್ರಸೆಲ್ಸ್ ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಷ್ಯಾ-ಉಕ್ರೇನ್ ಸಂಘರ್ಷದ ವಿಚಾರದಲ್ಲಿ ಭಾರತದ ಪ್ರಸ್ತುತ ನಿಲುವನ್ನು ಪ್ರತಿಪಕ್ಷಗಳು ಸಂಪೂರ್ಣವಾಗಿ ಒಪ್ಪುತ್ತವೆ ಎಂದು ನಾನು ಭಾವಿಸುತ್ತೇನೆ.

ನಾವು ರಷ್ಯಾದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇವೆ. ವಿರೋಧ ಪಕ್ಷವು ಸರ್ಕಾರಕ್ಕಿಂತ ಭಿನ್ನವಾದ ಅಭಿಪ್ರಾಯ ಹೊಂದಿರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ. 

ಜಿ20 ಶೃಂಗಸಭೆಗೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡ ರಾಹುಲ್ ಗಾಂಧಿ, ಇದರಲ್ಲಿ ವಿರೋಧಾಭಾಸವೇನು? ಅವರು ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸದಿರಲು ನಿರ್ಧರಿಸಿದ್ದಾರೆ. ಭಾರತದ ಜನಸಂಖ್ಯೆಯ ಶೇಕಡಾ 60 ರಷ್ಟು ನಾಯಕರನ್ನು ಅವರು ಗೌರವಿಸುವುದಿಲ್ಲ ಎಂದು ಅದು ನಿಮಗೆ ಹೇಳುತ್ತದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ