ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟ ನಾವೂ ಮಾಡಿದ್ದೇವೆ : ಬೊಮ್ಮಾಯಿ

ಭಾನುವಾರ, 9 ಏಪ್ರಿಲ್ 2023 (14:05 IST)
ನವದೆಹಲಿ : ನಂದಿನಿ ನಂಬರ್ ಒನ್ ಬ್ರ್ಯಾಂಡ್ ಆಗಲಿದ್ದು, ಅಮುಲ್ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟವನ್ನು ನಾವು ಕೂಡಾ ಮಾಡಿದ್ದೇವೆ. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಅಮುಲ್ ಹಿಮ್ಮೆಟ್ಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಲ್ಲಾ ಅಭ್ಯರ್ಥಿಗಳ ವಿಚಾರ ಚರ್ಚೆ ಮಾಡಲಾಗುವುದು. ಭಾನುವಾರ ಸಂಜೆ 5 ಗಂಟೆಗೆ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದರು.

ಕೆಲ ಎಂಎಲ್ಸಿ ಮತ್ತು ಸಂಸದರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಚರ್ಚೆಯ ಬಳಿಕ ಎಷ್ಟು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ನಿರ್ಧಾರವಾಗಲಿದೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ