ಇನ್ಮುಂದೆ ಮಂದಿರ ಹೋರಾಟದಲ್ಲಿ ನಾವಿಲ್ಲ: ಮೋಹನ್ ಭಾಗವತ್
ಕಾಶಿ ಜ್ಞಾನವಾಪಿ ಸೇರಿದಂತೆ ದೇಶದ ವಿವಿಧ ಮಸೀದಿಗಳ ಕುರಿತು ವಿವಾದ ಎದ್ದಿರುವ ನಡುವೆಯೇ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ಆರ್ಎಸ್ಎಸ್ ತರಬೇತಿ ಶಿಬಿರದಲ್ಲಿ ಗುರುವಾರ ಸಂಜೆ ಮಾತನಾಡಿದ ಅವರು, ಮುಸ್ಲಿಮರೇನು ಹೊರಗಿನವರಲ್ಲ. ಅವರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಪೂರ್ವದಲ್ಲಿ ಅವರು ಹಿಂದೂಗಳೇ ಆಗಿದ್ದರು ಎಂದು ಹೇಳಿದರು.
ಜ್ಞಾನವಾಪಿ ಮಸೀದಿ ವಿಚಾರವನ್ನು ಪ್ರಸ್ತಾಪಿಸಿ, ಹಿಂದೂ ಹಾಗೂ ಮುಸ್ಲಿಮರು ಮಾತುಕತೆ ಮೂಲಕ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಆದರೆ ಇದು ಎಲ್ಲ ಸಮಯದಲ್ಲೂ ಸಾಧ್ಯವಾಗಲಾರದು. ಹೀಗಾಗಿ ಕೋರ್ಚ್ನಲ್ಲಾದರೂ ತೀರ್ಪು ಬಂದಾಗ ಸ್ವೀಕಾರ ಮಾಡಬೇಕು ಎಂದು ತಿಳಿಸಿದರು.