ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ
ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ವಿಜಯ್ ಶಾ ಅವರು ಆಪರೇಷನ್ ಸಿಂಧೂರ್‌ನ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ಭಾರತೀಯ ಸೇನಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಹೇಳಿಕೆ ನೀಡುವ ಮೂಲಕ ರಾಜಕೀಯ ಬಿರುಗಾಳಿ ಎಬ್ಬಿಸಿದ್ದಾರೆ.
ಕರ್ನಲ್ ಖುರೇಷಿಯನ್ನು "ಭಯೋತ್ಪಾದಕರಿರುವ ಅದೇ ಸಮುದಾಯದ ಸಹೋದರಿ" ಎಂದು ಬ್ರಾಂಡ್ ಮಾಡುವಂತೆ ಷಾ ಅವರ ಹೇಳಿಕೆಗಳು ಭಾರತೀಯರಿಂದ ತೀವ್ರ ಟೀಕೆಗೆ ಕಾರಣವಾಗಿವೆ.