ರಾಮಜನ್ಮಭೂಮಿ ವಿವಾದ: ಸುಪ್ರೀಂಕೋರ್ಟ್ ಸಲಹೆ ಸ್ವಾಗತಾರ್ಹ ಎಂದ ಆಡ್ವಾಣಿ

ಮಂಗಳವಾರ, 21 ಮಾರ್ಚ್ 2017 (19:10 IST)
ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದವನ್ನು ಸಂಧಾನದ ಮೂಲಕ ಇತ್ಯರ್ಥಗೊಳಿಸುವುದು ಸೂಕ್ತ ಎಂದು ಸುಪ್ರೀಂಕೋರ್ಟ್ ನೀಡಿರುವ ಸಲಹೆಯನ್ನು ಹಿರಿಯ ಬಿಜೆಪಿ ಮುಖಂಡ ಎಲ್.ಕೆ.ಆಡ್ವಾಣಿ ಸ್ವಾಗತಿಸಿದ್ದಾರೆ.
 
ಉಭಯ ಸಮುದಾಯಗಳ ಮುಖಂಡರು ಪರಸ್ಪರ ಚರ್ಚಿಸಿ ವಿವಾದಕ್ಕೆ ತೆರೆಎಳೆಯುವುದು ಸಮಂಜಸವಾಗಿದೆ ಎಂದು ತಿಳಿಸಿದ್ದಾರೆ.
 
ರಾಮಮಂದಿರ-ಬಾಬ್ರಿ ಮಸೀದಿ ಪ್ರಕರಣದಲ್ಲಿ ದೋಷಿಯಾಗಿರುವ ಎಲ್.ಕೆ.ಆಡ್ವಾಣಿ, ಸಂಧಾನದಿಂದಲೇ ರಾಮಮಂದಿರ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. 
 
ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದ ಧಾರ್ಮಿಕ ಭಾವನೆಗಳು ಹೊಂದಿರುವ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದರಿಂದ, ಎರಡೂ ಸಮುದಾಯದವರು ಮುಕ್ತ ಮನಸ್ಸಿನಿಂದ ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆಸುವುದು ಸೂಕ್ತ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜಿ.ಎಸ್.ಖೇಹರ್ ಸಲಹೆ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ