ಕಾಶ್ಮೀರಿಗಳೊಂದಿಗೆ ಮಾತನಾಡುತ್ತೇವೆ ಹೊರತು ಪಾಕಿಸ್ತಾನಿಗಳೊಂದಿಗಲ್ಲ : ಅಮಿತ್ ಶಾ

ಗುರುವಾರ, 10 ಆಗಸ್ಟ್ 2023 (10:17 IST)
ನವದೆಹಲಿ : ಮಣಿಪುರ ಹಿಂಸಾಚಾರದ ವಿಚಾರವಾಗಿ ವಾಗ್ದಾಳಿ ನಡೆಸಿರುವ ಪ್ರತಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಉತ್ತರ ನೀಡಿದ್ದಾರೆ. ರಾಜ್ಯದ ಬಿರೇನ್ ಸಿಂಗ್ ಸರ್ಕಾರವು ಸಮರ್ಥವಾಗಿ ಹಿಂಸಾಚಾರ ಪರಿಸ್ಥಿತಿಯನ್ನು ಎದುರಿಸಿದೆ.
 
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಪ್ರತಿಪಕ್ಷಗಳ ಬೇಡಿಕೆಗಳನ್ನು ಅವರು ತಳ್ಳಿಹಾಕಿದ್ದಾರೆ. ರಾಜ್ಯ ಸರ್ಕಾರವು ಸಹಕರಿಸದಿದ್ದಾಗ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆ. ಆದರೆ ಮಣಿಪುರ ಸರ್ಕಾರ ಹಿಂಸಾಚಾರವನ್ನು ಹತ್ತಿಕ್ಕಲು ಕ್ರಮ ಕೈಗೊಂಡಿದೆ.

ಅಲ್ಲಿನ ಮುಖ್ಯಮಂತ್ರಿ ಈ ವಿಚಾರವಾಗಿ ಸಹಕರಿಸುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಸರ್ಕಾರ ಹೇಳಿಕೊಂಡಿದೆ. ರಾಜ್ಯದಲ್ಲಿ ಸುಮಾರು 36,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಜನರನ್ನು ದಾರಿತಪ್ಪಿಸಲು ಅವಿಶ್ವಾಸ ಮಂಡಿಸಲಾಗಿದೆ ಎಂದು ಆರೋಪಿಸಿದ ಅವರು, ದೇಶ ವಂಶಾಡಳಿತ, ಭ್ರಷ್ಟಾಚಾರ, ಜಾತೀಯತೆಯಿಂದ ನರಳುತ್ತಿತ್ತು. ಪ್ರಧಾನಿ ಮೋದಿ ಇದನ್ನೆಲ್ಲ ಮುಗಿಸಿ ದೇಶಕ್ಕೆ ಸಾಧನೆಯ ರಾಜಕಾರಣ ನೀಡಿದ್ದಾರೆ. ಸ್ವಾತಂತ್ರ್ಯದ ನಂತರ ಭಾರತವು ಸಂಪೂರ್ಣವಾಗಿ ನಂಬುವ ನಾಯಕರಿದ್ದರೆ ಅದು ಪ್ರಧಾನಿ ಮೋದಿ. ಈ ಅವಿಶ್ವಾಸ ನಿರ್ಣಯವು ಜನರ ಆಯ್ಕೆಯನ್ನು ಪ್ರತಿಬಿಂಬಿಸುವುದಿಲ್ಲ. ಕಾಂಗ್ರೆಸ್ ಪಕ್ಷದಂತೆ ಬಿಜೆಪಿ ಗೆಲ್ಲಲು ಲಂಚದ ಮೊರೆ ಹೋಗುವುದಿಲ್ಲ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ