ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇಂದು ನಾಮಪತ್ರ ಸಲ್ಲಿಕೆ
ಶುಕ್ರವಾರ, 10 ಸೆಪ್ಟಂಬರ್ 2021 (10:16 IST)
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಭಾಬಾನಿಪುರ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ವೇಳಾಪಟ್ಟಿಯ ಪ್ರಕಾರ, ಸೆಪ್ಟೆಂಬರ್ 30 ರಂದು ಮತದಾನ ನಡೆಯಲಿದೆ ಮತ್ತು ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಚುನಾವಣಾ ಆಯೋಗ ತಿಳಿಸಿದೆ.
ಭಾಬನಿಪುರದ ಉಪ ಚುನಾವಣೆಗೆ ಮಮತಾ ಬ್ಯಾನರ್ಜಿ ಅವರನ್ನು ಅಭ್ಯರ್ಥಿಎಂದು ಟಿಎಂಸಿ ಭಾನುವಾರ ಅಧಿಕೃತವಾಗಿ ಘೋಷಿಸಿತ್ತು. ಸಾಂವಿಧಾನಿಕ ಬಿಕ್ಕಟ್ಟನ್ನು ತಪ್ಪಿಸಲು ರಾಜ್ಯ ಸರ್ಕಾರ ಮನವಿ ಮಾಡಿದ ನಂತರ ಚುನಾವಣಾ ಆಯೋಗವು ಕಳೆದ ವಾರ ಉಪಚುನಾವಣೆಯನ್ನು ಘೋಷಿಸಿದ ನಂತರ ದಕ್ಷಿಣ ಕೋಲ್ಕತ್ತಾ ಕ್ಷೇತ್ರದಲ್ಲಿ ಟಿ.ಎಂ.ಸಿ.ಯ ಪ್ರಚಾರ ನಡೆಯುತ್ತಿದೆ.
ನಂದಿಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ವಿರುದ್ಧ ಸೋತಬ್ಯಾನರ್ಜಿ ಅವರು ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಈ ಉಪಚುನಾವಣೆಯಲ್ಲಿ ಗೆಲ್ಲಬೇಕಾಗಿದೆ. ಉಪಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲವಾದರೂ, ಕಾಂಗ್ರೆಸ್ ಮಮತಾ ವಿರುದ್ಧ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ ಎಂದು ಘೋಷಿಸಿದೆ. ಭಾಬಾನಿಪುರ ಉಪಚುನಾವಣೆಗೆ ಸಿಪಿಐ(ಎಂ) ನಾಯಕ ಶ್ರೀಜೀಬ್ ಬಿವಾಸ್ ತನ್ನ ಅಭ್ಯರ್ಥಿಯಾಗಲಿದ್ದಾರೆ ಎಂದು ಎಡರಂಗ ಘೋಷಿಸಿದೆ.