ಪಶ್ಚಿಮ ಬಂಗಾಳ ಚುನಾವಣೆ: ಮೋದಿ- ಮಮತಾ ಮೈತ್ರಿ ಪ್ರಜಾಪ್ರಭುತ್ವಕ್ಕೆ ಮಾರಕ ಎಂದ ಸೋನಿಯಾ

ಮಂಗಳವಾರ, 26 ಏಪ್ರಿಲ್ 2016 (20:06 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೈತ್ರಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
 
ಒಂದು ವೇಳೆ, ಇಂತಹ ಪಕ್ಷಗಳು ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಮತದಾರರಿಗೆ ಮುನ್ಸೂಚನೆ ನೀಡಿದ್ದಾರೆ. 
 
ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಸೋನಿಯಾ, ಪ್ರಧಾನಿ ಮೋದಿ ನಿಮ್ಮ ಮೀನುಗಳ ಜೀವವನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲ. ದೇಶದ ಗಡಿಯನ್ನು ಹೇಗೆ ರಕ್ಷಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು. 
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರದ ಕಾರ್ಯವೈಖರಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ, ಜಾತ್ಯಾತೀತವಾದ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ ಎಂದು ಆರೋಪಿಸಿದರು. 
 
ಕಳೆದ ಲೋಕಸಭೆ ಚುನಾವಣೆಯಲ್ಲಿ ದೇಶದ ಜನತೆಗೆ ಸುಂದರವಾದ ಕನಸುಗಳನ್ನು ತೋರಿಸಿ ಅಧಿಕಾರಕ್ಕೇರಿದ ಪ್ರಧಾನಿ ಮೋದಿ, ತಾವು ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದಾರೆ ಎಂದರು.
 
ಪಶ್ಚಿಮ ಬಂಗಾಳ ಅಭಿವೃದ್ಧಿಯಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳುತ್ತಾರೆ. ಆದರೆ, ಅಭಿವೃದ್ಧಿಯಾಗಿರುವುದು ನಿರುದ್ಯೋಗ, ರೈತರ ಆತ್ಮಹತ್ಯೆ ಮತ್ತು ಕಾನೂನು ಸುವ್ಯವಸ್ಥೆ ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ