ಹುಡುಗಿಯರ ಸೋಶಿಯಲ್ ಮೀಡಿಯಾ ಖಾತೆಗಳನ್ನು ಹ್ಯಾಕ್ ಮಾಡಿದ ಯುವಕ ಮಾಡಿದ್ದೇನು ಗೊತ್ತಾ?
ಶುಕ್ರವಾರ, 29 ಜನವರಿ 2021 (09:49 IST)
ಲಕ್ನೋ : 26 ವರ್ಷದ ಯುವಕನೊಬ್ಬ ಸುಮಾರು 400 ಹುಡುಗಿಯರ ಸೋಶಿಯಲ್ ಮೀಡಿಯಾ ಖಾತೆಗಳನ್ನು ಹ್ಯಾಕ್ ಮಾಡಿ ನಂತರ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆಂದು ಆರೋಪಿಸಲಾಗಿದೆ.
ಯುವಕ ಹುಡುಗಿಯರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಅದರಲ್ಲಿರುವ ಆಕ್ಷೇಪಾರ್ಹ ಫೋಟೊಗಳನ್ನು ತೆಗೆದುಕೊಂಡು ಅವರ ಬಳಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಈ ಬಗ್ಗೆ ಹುಡುಗಿಯೊಬ್ಬರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.