ಯುಗಾದಿ ಸಂಭ್ರಮದಂದೇ ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡಿದ ನರೇಂದ್ರ ಮೋದಿ ಮಾಡಿದ್ದೇನು

Sampriya

ಭಾನುವಾರ, 30 ಮಾರ್ಚ್ 2025 (13:28 IST)
Photo Courtesy X
ನಾಗ್ಪುರ: ಯುಗಾದಿ ಹಬ್ಬದ ಸಂಭ್ರಮದ ದಿನದಂದೇ ಪ್ರಧಾನಿ ನರೇಂದ್ರ ಮೋದಿ ಅವರು ನಾಗ್ಪುರದ ಸ್ಮೃತಿ ಭವನದಲ್ಲಿರುವ ಆರ್‌ಎಸ್‌ಎಸ್‌ನ ಕಚೇರಿಗೆ ಭೇಟಿ ನೀಡಿದರು.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಇದೇ ವೇಳೆ ಇದ್ದರು. ಆರ್‌ಎಸ್‌ಎಸ್‌ನ ಕಚೇರಿ ಸಿಬ್ಬಂದಿಯನ್ನು ಭೇಟಿಯಾಗಿ ಅವರೊಂದಿಗೆ ಫೋಟೊ ತೆಗೆಸಿಕೊಂಡರು.

 ನಾಗ್ಲುರದ ರೇಶಿಮ್ ಭಾಗ್‌ನಲ್ಲಿರುವ ಡಾ. ಹೆಡಗೇವಾರ್ ಸ್ಮೃತಿ ಮಂದಿರಕ್ಕೆ(ಆರ್‌ಎಸ್‌ಎಸ್‌ ಕಚೇರಿ) ಭೇಟಿ ನೀಡಿದರು.  ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್ ಹಾಗೂ ಎರಡನೇ ಸರಸಂಘ ಸಂಚಾಲಕ ಎಂ.ಎಸ್ ಗೋಲ್ವಾಲ್ಕರ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.

ಮೋದಿಯವರು ಪ್ರಧಾನಿಯಾದ ಬಳಿಕ ಇಲ್ಲಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. 2000ರ ಆಗಸ್ಟ್ 27ರಂದು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಡಾ. ಹೆಡಗೇವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ