ಜೈಪುರ್ : ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಯ ನಂತರ ದಾಖಲೆಗಳಲ್ಲಿ ಹೆಸರು ಮತ್ತು ಲಿಂಗವನ್ನು ನವೀಕರಿಸಲು ದೈಹಿಕ ಶಿಕ್ಷಣದ ಶಿಕ್ಷಕನಿಗೆ ರಾಜಸ್ಥಾನ ಹೈಕೋರ್ಟ್ ಅನುಮತಿ ನೀಡಿದೆ.
ಅಲ್ಲದೆ ಅರ್ಜಿದಾರರು ತಮ್ಮ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ. ಒಬ್ಬ ವ್ಯಕ್ತಿಯ ಲಿಂಗದ ಗುರುತನ್ನು ಆಯ್ಕೆ ಮಾಡುವ ಹಕ್ಕು ಅವರ ವ್ಯಕ್ತಿತ್ವದ ಅತ್ಯಗತ್ಯ ಭಾಗವಾಗಿದೆ. ಅಲ್ಲದೆ ಅವರ ಸ್ವ ನಿರ್ಣಯ, ಘನತೆ ಮತ್ತು ಮೂಲಭೂತ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ ಎಂದು ನ್ಯಾಯಾಲಯವು ಒತ್ತಿ ಹೇಳಿದೆ.
ಅಲ್ಲದೆ ವ್ಯಕ್ತಿಯ ಲೈಂಗಿಕ ದೃಷ್ಟಿಕೋನ ಅಥವಾ ಲಿಂಗದ ಗುರುತಿನ ಆಧಾರದ ಮೇಲೆ ಯಾವುದೇ ತಾರತಮ್ಯವನ್ನು ಮಾಡುವಂತಿಲ್ಲ. ಎಲ್ಲರಿಗೂ ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಆನಂದಿಸಲು ಹಕ್ಕಿದೆ ಎಂದು ನ್ಯಾಯಮೂರ್ತಿ ಅನೂಪ್ ಕುಮಾರ್ ಧಂಡ್ ತೀರ್ಪಿನ ವೇಳೆ ಉಲ್ಲೇಖಿಸಿದ್ದಾರೆ.