ಮಕ್ಕಳಾಗಲಿಲ್ಲ ಎಂದು ನಿಂದಿಸುತ್ತಿದ್ದ ಪತಿಗೆ ಪತ್ನಿ ಮಾಡಿದ್ದೇನು?
ಬುಧವಾರ, 6 ಜನವರಿ 2021 (07:47 IST)
ನವದೆಹಲಿ : ಮಕ್ಕಳಾಗದ ವಿಚಾರಕ್ಕೆ ಪತಿ ಪತ್ನಿಯ ನಡುವೆ ಜಗಳ ನಡೆದು ಪತ್ನಿ ಪತಿಯನ್ನು ಚಾಕುವಿನಿಂದ ಇರಿದು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ.
ಇಬ್ಬರು ಒಂದೇ ವಿಮಾ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು, ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಇದರಿಂದ ನೊಂದ ಪತ್ನಿ ಪತಿಯನ್ನು ಚಾಕುವಿನಿಂದ 12 ಬಾರಿ ಇರಿದು ಕೊಂದು ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.