ಕೂದಲು ಉದುರುತ್ತಿದೆ ಎಂದು ಮನನೊಂದ ಯುವಕ ಮಾಡಿಕೊಂಡಿದ್ದಾದ್ರು ಏನು?
ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೆ ಶರಣಾದ ಯುವಕ. ಪ್ರಶಾಂತ್ ವೆಹಿಕಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಪ್ರಶಾಂತ್ಗೆ ಹುಬ್ಬು ಸೇರಿದಂತೆ ತಲೆಕೂದಲು ಉದುರುತ್ತಿತ್ತು.
ಇದರಿಂದಾಗಿ 2014ರಿಂದ ಕೂದಲು ಉದುರುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಿದರೂ ತಲೆ ಕೂದಲು ಉದುರುವುದು ನಿಂತಿರಲಿಲ್ಲ. ಆದರೆ ಅದ್ಯಾವುದು ಪ್ರಯೋಜನವಾಗಿರಲಿಲ್ಲ.
ಅಷ್ಟೇ ಅಲ್ಲದೇ ಕೂದಲು ಇಲ್ಲ ಎಂದು ಅನೇಕರು ಆತನನ್ನು ಮದುವೆಯಾಗಲು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದ ಪ್ರಶಾಂತ ಆತ್ಮಹತ್ಯೆಗೆ ಶರಣಾಗಿದ್ದಾನೆ.