ಯಜಮಾನನೊಂದಿಗೆ ಅಫೇರ್; ಪ್ರಶ್ನಿಸಿದ್ದಕ್ಕೆ ಗಂಡನಿಗೆ ಈ ಗತಿ ತಂದುಬಿಟ್ಟ ಹೆಂಡತಿ
ಶನಿವಾರ, 7 ನವೆಂಬರ್ 2020 (09:51 IST)
ಅಹಮದಾಬಾದ್ : ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತಿಗೆ ಪತ್ನಿ ಬೆಂಕಿ ಹಚ್ಚಿದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.
ಮಹಿಳೆ ಮನೆ ಕೆಲಸ ಮಾಡುತ್ತಿದ್ದ ಮನೆಯ ಯಜಮಾನನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ಬಗ್ಗೆ ತಿಳಿದ ಪತಿ ಮಹಿಳೆಯನ್ನು ಪ್ರಶ್ನಿಸಿದ್ದಾನೆ. ಇದರಿಂದ ಇಬ್ಬರ ನಡುವೆ ಜಗಳ ನಡೆದಿದೆ. ರಾತ್ರಿ ಪತಿ ಮಲಗಿದ್ದಾಗ ಅವನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾಳೆ. ಈ ಘಟನೆಯಲ್ಲಿ ವ್ಯಕ್ತಿಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಆರೋಪಿ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.