ಪುಲ್ವಾಮಾ ದಾಳಿಯ ಕರಾಳ ದಿನದಲ್ಲಿ ನಡೆದಿದ್ದೇನು?

ಮಂಗಳವಾರ, 14 ಫೆಬ್ರವರಿ 2023 (12:49 IST)
ನವದೆಹಲಿ : ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ 4 ವರ್ಷಗಳ ಹಿಂದೆ ಭಾರತೀಯ ಸೇನೆ ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು.

ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು. ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ ದಿನ ಎಂದೇ ಹೇಳಬಹುದು. ಹೌದು.. 4 ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್ಪಿಎಫ್ ಅಧಿಕಾರಿಗಳು ಹುತಾತ್ಮರಾಗಿದ್ದರು. ಈ ಸುದ್ದಿ ಕೇಳಿ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು. 

ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಂಗಾವಲು ಪಡೆಯ ಮೇಲೆ ಭೀಕರವಾಗಿ ದಾಳಿ ನಡೆಸಲಾಗಿತ್ತು. ಈ ಕರಾಳ ಘಟನೆ ಇಂದು ನೆನಪಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸ್ಮರಿಸಿದ್ದಾರೆ.

ಈ ದಿನ ನಾವು ಪುಲ್ವಾಮಾದ್ಲಿ ನಮ್ಮ ಪರಾಕ್ರಮಿಗಳನ್ನು ಕಳೆದುಕೊಂಡಿದ್ದನ್ನು ನೆನಪಿಸಿಕೊಳ್ಳುತ್ತೇವೆ. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ ಎಂದು ಮೋದಿ ಭಾವುಕ ಟ್ವೀಟ್ ಸಂದೇಶ ಹಂಚಿಕೊಂಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ