ಸೋನಿಯಾ ಗಾಂಧಿಗೆ ಆರೋಗ್ಯದಲ್ಲಿ ಇದೇನಾಯ್ತು? ಆಸ್ಪತ್ರೆಗೆ ದಾಖಲು

ಸೋಮವಾರ, 4 ಸೆಪ್ಟಂಬರ್ 2023 (07:58 IST)
ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವರದಿಗಳ ಪ್ರಕಾರ ಜ್ವರದ ಹಿನ್ನೆಲೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರ ಮೇಲೆ ನಿಗಾವಹಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಈ ವರ್ಷದಲ್ಲಿ ಸೋನಿಯಾ ಗಾಂಧಿ ಅವರು 2 ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ವೈರಲ್ ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ಜನವರಿ 12ರಂದು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಜನವರಿ 17ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ