ಏನಿದು ದೆಹಲಿಯ ಹಳೆಯ ಮದ್ಯ ನೀತಿ?

ಸೋಮವಾರ, 1 ಆಗಸ್ಟ್ 2022 (10:03 IST)
ದೆಹಲಿಯ ಮೂಲ ಮದ್ಯ ನೀತಿ ಪ್ರಕಾರ, ಮದ್ಯ ಮಾರಾಟದಲ್ಲಿ ಯಾರೂ ಕೂಡ ರಿಯಾಯಿತಿ ಕೊಡುವಂತಿಲ್ಲ ಎಂದಿತ್ತು.

ಮದ್ಯ ಮಾರಾಟದಲ್ಲಿ ಖಾಸಗಿಗಿಂತ ಸರ್ಕಾರಿ ಮಳಿಗೆಗಳೇ ಹೆಚ್ಚಿದ್ದವು. ಕರ್ನಾಟಕದಲ್ಲಿ ಎಂಎಸ್ಐಎಲ್ ಇದ್ದಂತೆ ದೆಹಲಿಯಲ್ಲಿ ಮದ್ಯ ಮಾರಾಟಕ್ಕೆ ಸರ್ಕಾರಿ ಸ್ವಾಮ್ಯದ 4 ನಿಗಮಗಳಿವೆ.

2021ಕ್ಕೆ ಮುನ್ನ ದೆಹಲಿಯಲ್ಲಿ 864 ಮದ್ಯದಂಗಡಿಗಳಿದ್ದವು. ಅದರಲ್ಲಿ ಸರ್ಕಾರಿ ಸಂಸ್ಥೆಗಳ ಮಳಿಗೆಗಳೇ 475 ಇದ್ದವು. ದೆಹಲಿಯಲ್ಲಿ ಸಮರ್ಪಕವಾದ ಮದ್ಯ ನೀತಿ ಇರಲಿಲ್ಲ. ಆದ ಕಾರಣ ಸರ್ಕಾರಿ ಸ್ವಾಮ್ಯದ ಲಿಕ್ಕರ್ ಶಾಪ್ಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ