ಉಕ್ರೇನ್ ಕದನ ವಿರಾಮಕ್ಕೆ ಮೋದಿ ಕರೆ ಏನು?

ಬುಧವಾರ, 4 ಮೇ 2022 (09:03 IST)
ಕೋಪನ್ಹೇಗ ನ್: ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ್ದ ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್ನಲ್ಲಿ ನಡೆಯುತ್ತಿರುವ ನಾಗರಿಕರ ಹತ್ಯೆಗಳ ಬಗ್ಗೆ ಕಳಕಳಿ ವ್ಯಕ್ತಪಡಿಸಿದ್ದು,

ಉಭಯ ರಾಷ್ಟ್ರಗಳು ಬಿಕ್ಕಟ್ಟು ಪರಿಹರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಉಕ್ರೇನ್ನಲ್ಲಿ ತಕ್ಷಣ ಕದನ ವಿರಾಮ ಘೋಷಿಸಿ ಉಭಯ ದೇಶಗಳು ಮಾತುಕತೆಯ ಮೂಲಕ ಬಿಕ್ಕಟ್ಟು ಪರಿಹರಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಇದೇ ವೇಳೆ ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟುಗಳ ಬಗ್ಗೆ ಚರ್ಚೆ ನಡೆಸಿ, ವಿಶ್ವಸಂಸ್ಥೆಯ ಚಾರ್ಟರ್ನಲ್ಲಿ ತಿಳಿಸಿದಂತೆ ಮಾತುಕತೆಯ ಬಿಕ್ಕಟ್ಟನ್ನು ಪರಿಹರಿಸಲು ಉಭಯ ದೇಶಗಳು ಮುಂದಾಗಬೇಕು ಎಂದು ಕರೆ ನೀಡಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ