ರಾಜ್ಯಗಳಿಗೆ ತಜ್ಞರ ಎಚ್ಚರಿಕೆ ಏನು?

ಮಂಗಳವಾರ, 19 ಏಪ್ರಿಲ್ 2022 (11:30 IST)
ಮುಂಬೈ : ಕೇಂದ್ರ ಸರ್ಕಾರ ಜೂನ್ನಲ್ಲಿ ಜಿಎಸ್ಟಿ ಪರಿಹಾರವನ್ನು ಸ್ಥಗಿತಗೊಳಿಸಲಿದೆ.
 
ರಾಜ್ಯ ಸರ್ಕಾರಗಳು ತಮ್ಮ ಆದಾಯಕ್ಕೆ ತಕ್ಕಂತೆ ಖರ್ಚು ಮಾಡಿಕೊಂಡು ಹೋಗದಿದ್ದರೆ, ಮುಂದೆ ಕಷ್ಟವನ್ನು ಎದುರಿಸಬೇಕಾಗಬಹುದು ಎಂದು ಆರ್ಥಿಕ ತಜ್ಞರು ಎಚ್ಚರಿಸಿದ್ದಾರೆ.

ರಾಜ್ಯ ಸರ್ಕಾರಗಳು ರೈತರ ಸಾಲ ಮನ್ನಾದಂತಹ ಯೋಜನೆ ಹಾಗೂ ಉಚಿತ ಕೊಡುಗೆಗಳನ್ನು ನೀಡುವುದಕ್ಕೆ ಕಡಿವಾಣ ಹಾಕಬೇಕು. ಕೇಂದ್ರ ಸರ್ಕಾರ ಜೂನ್ನಲ್ಲಿ ಜಿಎಸ್ಟಿ ಪರಿಹಾರ ಸ್ಥಗಿತಗೊಳಿಸುವುದರಿಂದ ರಾಜ್ಯಗಳು ಖರ್ಚುಗಳನ್ನು ಆದ್ಯತೆಯ ಮೇರೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದ್ದಾರೆ. 

ಇತ್ತೀಚೆಗೆ ಕೆಲ ಆರ್ಥಿಕ ತಜ್ಞರು ಉಚಿತ ಕೊಡುಗೆ ಹಾಗೂ ಸಬ್ಸಿಡಿಗಳಿಗೆ ಕಡಿವಾಣ ಹಾಕದಿದ್ದರೆ ಭಾರತಕ್ಕೂ ಶ್ರೀಲಂಕಾದ ಸ್ಥಿತಿ ಬರಬಹುದು ಎಂದು ಪ್ರಧಾನಿ ನರೇಂದ್ರ ಮೋದಿಗೆ ತಿಳಿಸಿದ್ದರು. ಇದರ ಬೆನ್ನಲ್ಲೇ ಎಸ್ಬಿಐ ಮುಖ್ಯ ಆರ್ಥಿಕ ಸಲಹೆಗಾರರ ಸಮಿತಿಯೊಂದು ಅಧ್ಯಯನ ನಡೆಸಿ ರಾಜ್ಯಗಳಿಗೂ ವರದಿ ನೀಡಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ