ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಹೌದು ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗಿಯಾಗಿದ್ದ ವೇಳೆ ಮೋದಿ ಹತ್ಯೆಗೆ ಸಂಚು ನಡೆದಿತ್ತು ಎನ್ನಲಾಗಿದೆ.
ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು ಆರೋಪ ಕೇಳಿಬರುತ್ತಿದ್ದು, ಈ ವಿಚಾರವಾಗಿ ಅನೇಕ ಸುದ್ದಿ ಸಂಸ್ಥೆಗಳು ವರದಿ ಮಾಡುತ್ತಿದೆ.
ಅಮೆರಿಕ ಭಾರತದ ಮೇಲೆ ರಷ್ಯಾ ತೈಲ ಖರೀದಿಸದಂತೆ ಒತ್ತಡ ಹೇರುತ್ತಿರುವುದು ಹಾಗೂ ಭಾರತದ ಕೃಷಿ, ಹಾಲಿನ ಮಾರುಕಟ್ಟೆಯನ್ನು ತನಗೆ ಮುಕ್ತಮಾಡಿಕೊಡಬೇಕೆಂಬ ಬೇಡಿಕೆಗೆ ಭಾರತ ಇದುವರೆಗೂ ಬಗ್ಗಿಲ್ಲ.
ಈ ಹಿನ್ನೆಲೆ ಈಚೆಗೆ ಭಾರತ ಹಾಗೂ ಅಮೆರಿಕ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದೆ. ಈ ಮಧ್ಯೆಯೇ ಇಂತಹ ಊಹಾಪೋಹ ಭಾರೀ ಚರ್ಚೆಗೆ ಕಾರಣವಾಗಿದೆ.
ಅಮೆರಿಕದ ಸುಂಕ ಬೆದರಿಕೆಗಳ ಬೆನ್ನಲ್ಲೇ ಭಾರತ- ಚೀನಾ ಸಂಬಂಧಗಳಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿತ್ತು ಅದಷ್ಟೇ ಅಲ್ಲದೇ ರಷ್ಯಾ-ಭಾರತ-ಚೀನಾಗಳು ಒಗ್ಗೂಡಿರುವುದನ್ನು ಸಹಿಸದ ದೇಶವೊಂದು ಮೋದಿ ಹತ್ಯೆಗೆ ಸಂಚು ರೂಪಿಸಿದೆ ಎನ್ನಲಾಗಿದೆ.
ಈ ಮಾಹಿತಿ ಹೊರಬೀಳಲು ಕಾರಣ ಏನೆಂದರೆ ಢಾಕಾದಲ್ಲಿ ನಿಯೋಜಿಸಲಾಗಿದ್ದ ಅಮೆರಿಕದ ವಿಶೇಷ ಪಡೆಗಳ ಅಧಿಕಾರಿ ಟೆರೆನ್ಸ್ ಅರ್ವೆಲ್ಲೆ ಜಾಕ್ಸನ್ ಆಗಸ್ಟ್ 31 ರಂದು ಶವವಾಗಿ ಪತ್ತೆಯಾಗಿರುವುದಾಗಿದೆ.
ಈ ವ್ಯಕ್ತಿಯನ್ನು ಅಮೆರಿಕ ಮ್ಯಾನ್ಮಾರ್ ನಲ್ಲಿ ಅರಾಕನ್ ಆರ್ಮಿಗೆ ಬಾಂಗ್ಲಾ ನೆರವು ನೀಡಲು ನಿಯೋಜಿಸುವ ನೆಪದಲ್ಲಿ ಸಕ್ರಿಯವಾಗಿರಿಸಿತ್ತು. ಈ ನಿಗೂಢ ಸಾವು ಸಿಐಎ ಹೆಜ್ಜೆಗುರುತು ಹಾಗೂ ಚೀನಾದಲ್ಲಿ ಮೋದಿ ಹತ್ಯೆಯ ಸಂಚಿನ ಯೋಜನೆ ಬಗ್ಗೆ ಹೇಳಿದೆ.
ಚೀನಾದ ನೆಲದಲ್ಲಿ ಭಾರತದ ಪ್ರಧಾನಿಯನ್ನು ಹತ್ಯೆ ಮಾಡಿದರೆ, ಶಾಶ್ವತವಾಗಿ ಚೀನಾ- ಭಾರತವನ್ನು ದೂರ ಮಾಡುವ ಮತ್ತು ಭಾರತದಲ್ಲಿ ಈಗಿನ ದೃಢ ಸರ್ಕಾರವನ್ನು ತೆಗೆದು ಅರಾಜಕತೆ ಉಂಟುಮಾಡಿ ತನ್ನ ಮಾತು ಕೇಳುವ ಸರ್ಕಾರವನ್ನು ಸ್ಥಾಪಿಸಬಹುದು ಎಂಬುದು ಈ ಯೋಜನೆಯ ಹಿಂದಿನ ಲೆಕ್ಕಾಚಾರವಾಗಿತ್ತು ಆದರೆ ರಷ್ಯಾ- ಭಾರತ ಜಂಟಿಯಾಗಿ ಈ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿದವು ಎಂದು ಹೇಳಲಾಗುತ್ತಿದೆ.
ಮೋದಿ ಹತ್ಯೆಗೆ ಬಂದಿದ್ದ ಏಜೆಂಟ್ ಅತ್ಯಂತ ನಿಗೂಢವಾಗಿ ಬಾಂಗ್ಲಾದೇಶದ ಹೊಟೆಲ್ ನಲ್ಲಿ ಸಾವಿಗೀಡಾಗಿದ್ದಾನೆ. ಈ ಮೂಲಕ ಸಿಐಎ ಲೆಕ್ಕಾಚಾರವನ್ನು ಭಾರತದ ರಾ ಸಂಪೂರ್ಣವಾಗಿ ತಲೆಕೆಳಗೆ ಮಾಡಿದೆ.