ಕೋಲ್ಕತ್ತಾ ವೈದ್ಯೆಯ ಕೇಸ್ ಬಗ್ಗೆ ಸ್ವಾತಂತ್ರ್ಯ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು

Krishnaveni K

ಗುರುವಾರ, 15 ಆಗಸ್ಟ್ 2024 (09:21 IST)
ನವದೆಹಲಿ: ಕೋಲ್ಕತ್ತಾದಲ್ಲಿ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯ ಮೇಲೆ ನಡೆದಿದ್ದ ರೇಪ್ ಆಂಡ್ ಮರ್ಡರ್ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಇಂದು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದಿದ್ದ ವೈದ್ಯೆ ಸಾವಿನ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ತವ್ಯದಲ್ಲಿದ್ದ ವೈದ್ಯೆಯನ್ನು ಆರ್ ಜಿ ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಕ್ರೂರವಾಗಿ ರೇಪ್ ಮಾಡಿ ಕೊಲೆ ಮಾಡಲಾಗಿತ್ತು.

ಈ ಪ್ರಕರಣದ ಬಗ್ಗೆ ದೇಶದಾದ್ಯಂತ ಎಲ್ಲಾ ವರ್ಗದವರೂ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಈ ಬಗ್ಗೆ ಇಂದು ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಉಲ್ಲೇಖ ಮಾಡಿದ್ದಾರೆ. ಬಜೆಟ್ ನಲ್ಲಿ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ತಂದಿದ್ದೇವೆ. ಮಹಿಳೆಯರು ಇಂದು ಎಲ್ಲಾ ಕ್ಷೇತ್ರವನ್ನೂ ಮುನ್ನಡೆಸುತ್ತಿದ್ದಾರೆ.

ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವ ಅಪರಾಧಿಗಳಿಗೆ ಶಿಕ್ಷೆಯಾಗಲಿ. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ರಾಕ್ಷಸೀ ಕೃತ್ಯಗಳು. ಇಂತಹ ಅಪರಾಧ ಎಸಗಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅಂತಹ ಅಪರಾಧ ಮಾಡಿದವರಿಗೆ ಭಯದ ವಾತಾವರಣ ನಿರ್ಮಿಸುತ್ತೇವೆ ಎಂದು ಮೋದಿ ಖಡಕ್ ಆಗಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ