ಪ್ರಧಾನಿ ಮೋದಿ ವಿದೇಶಿ ಬ್ಯಾಂಕ್‌ಗಳಲ್ಲಿರುವ 80 ಲಕ್ಷ ಕೋಟಿ ಹಣವನ್ನು ಮರಳಿ ತರುವುದಾಗಿ ಹೇಳಿದ್ದರು. ಕಪ್ಪು ಹಣ ಮರಳಿ ತಂದಿದ್ದಾರೆಯೇ? ಲೋಕಪಾಲ್ ಜಾರಿಗೊಳಿಸುವುದಾಗಿ ಹೇಳಿದ್ದರು ಜಾರಿಗೆ ತಂದರೆ? ಎಂದು ಪ್ರಶ್ನಿಸಿದರು. ಯಾವ ಭರವಸೆಗಳನ್ನು ಈಡೇರಿಸಿದ್ದಾರೆ? ದೇಶದ ಜನತೆ ಯಾಕೆ ಅವರನ್ನು ನಂಬಬೇಕು? ಪ್ರಧಾನಿ ಮೋದಿ ಮೇಲೆ ನಂಬಿಕೆಯಿಲ್ಲ. ಅವರು ನಂಬಿಕೆಗೆ ಅರ್ಹರಲ್ಲ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಕ್ಷದ ವಕ್ತಾರ ಕಪಿಲ್ ಸಿಬಲ್, ಪ್ರಧಾನಿ ಮೋದಿ ನೋಟು ನಿಷೇಧ ಬಿಕ್ಕಟ್ಟು 50 ದಿನಗಳೊಳಗಾಗಿ ಬಗೆಹರಿಯಲಿದೆ ಎಂದು ಹೇಳಿದ್ದಾರೆ. ಆದರೆ, ಆರ್‌ಬಿಐ ಕನಿಷ್ಠ ಆರು ತಿಂಗಳಾದರೂ ಬೇಕು ಎಂದು ಪ್ರತಿಪಾದಿಸುತ್ತಿದೆ ಎಂದು ಲೇವಡಿ ಮಾಡಿದರು.
ನೋಟು ನಿಷೇಧ ಬಿಕ್ಕಟ್ಟು ಎರಡು ದಿನಗಳಲ್ಲಿ ಸಾಮಾನ್ಯವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅದು ಸಾಧ್ಯವಾಗಲಿಲ್ಲ. ಅಂದಿನ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಎರಡು ವಾರಗಳಲ್ಲಿ ಪರಿಸ್ಥಿತಿ ತಹಬದಿಗೆ ಬರಲಿದೆ ಎಂದಿದ್ದರು. ಅದು ಕೂಡಾ ಆಗಲಿಲ್ಲ. ಹಾಗಾದ್ರೆ ನಾವು ಯಾಕೆ ಪ್ರಧಾನಿ ಮೋದಿಯವರನ್ನು ನಂಬಬೇಕು ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.