ಆಲಿಘಡ: ಇಂದಿನ ಯುವಜನರ ಸೆಲ್ಫೀ ಹುಚ್ಚು ಎಷ್ಟರಮಟ್ಟಿಗೆ ಇರುತ್ತದೆ ಎನ್ನುವುದನ್ನು ಹಲವು ಬಾರಿ ನೋಡಿದ್ದೇವೆ. ಅಂತಹದ್ದೇ ಒಂದು ಘಟನೆ ಉತ್ತರ ಪ್ರದೇಶದ ಪೊರಾ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಬಾಲಕನೊಬ್ಬ ಸೆಲ್ಫೀ ತೆಗೆಯಲು ಕೆಂಪು ಬಾವುಟ ತೋರಿಸಿ ರೈಲು ನಿಲ್ಲಿಸಿದ್ದಾನೆ. ಡೆಲ್ಲಿಯಿಂದ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿಗೆ ಕೆಂಪು ಬಾವುಟ ತೋರಿಸಿ ನಿಲ್ಲಿಸಿದ್ದಾನೆ. ನಂತರ ಸೆಲ್ಫೀ ತೆಗೆದು ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ರೈಲು ಚಾಲಕ ತುರ್ತು ಬ್ರೇಕ್ ಒತ್ತಿ ರೈಲು ನಿಲ್ಲಿಸಿ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಬಾಲಕ ಸ್ಥಳದಿಂದ ನಾಪತ್ತೆಯಾಗಿದ್ದ. ನಂತರ ಈ ಬಗ್ಗೆ ಪ್ರಕರಣ ದಾಖಲಿಸಲಾಯಿತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ