ಭಾರತೀಯರ ವಾಟ್ಸ್ಆ್ಯಪ್ ಖಾತೆ ಬ್ಯಾನ್!?

ಗುರುವಾರ, 3 ಫೆಬ್ರವರಿ 2022 (14:32 IST)
ಎರಡು ದಿನಗಳ ಹಿಂದೆಯಷ್ಟೆ ವಾಟ್ಸ್ಆ್ಯಪ್  ತನ್ನ ಮಾಸಿಕ ವರದಿಯನ್ನು ಬಿಡುಗಡೆ ಮಾಡಿದ್ದು ಡಿಸೆಂಬರ್‌ 2021ರಲ್ಲಿ 20 ಲಕ್ಷಕ್ಕೂ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ.
 
ಇದರ ಬೆನ್ನಲ್ಲೆ ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ವಾಟ್ಸ್ಆ್ಯಪ್ ತನ್ನ ಹೊಸ ವರದಿಯೊಂದನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಇದರಲ್ಲಿ ಐಟಿ ನಿಯಮದ ಅನ್ವಯ ಕಳೆದ ಆರು ತಿಂಗಳಲ್ಲಿ ಭಾರತದ ಬರೋಬ್ಬರಿ 1.32 ಕೋಟಿ ವಾಟ್ಸ್ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ.

ಖಾತೆಯನ್ನು ನಿಷೇಧ ಮಾಡಿದ ಬಗ್ಗೆ ವಾಟ್ಸ್ಆ್ಯಪ್ ಕಳೆದ ವರ್ಷ ಜುಲೈನಲ್ಲಿ ಮೊದಲ ಬಾರಿಗೆ ಬಹಿರಂಗ ಪಡಿಸಿತ್ತು. 15 ಮೇ 2021 ರಿಂದ 15 ಜೂನ್ 2021ರ ನಡುವೆ ಸುಮಾರು 20 ಲಕ್ಷ ಭಾರತೀಯರ ವಾಟ್ಸ್ಆ್ಯಪ್ ಖಾತೆ ನಿಷೇಧಿಸಲಾಗಿತ್ತು

ವಾಟ್ಸ್ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ.

ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, “ವಾಟ್ಸ್ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ.

ವರ್ಷಗಳಲ್ಲಿ, ನಮ್ಮ ಬಳಕೆದಾರರನ್ನು ನಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಸುರಕ್ಷಿತವಾಗಿರಿಸಲು ನಾವು ಕೃತಕ ಬುದ್ಧಿಮತ್ತೆ ಮತ್ತು ಇತರ ಅತ್ಯಾಧುನಿಕ ತಂತ್ರಜ್ಞಾನ, ಡೇಟಾ ವಿಜ್ಞಾನಿಗಳು, ತಜ್ಞರು ಮತ್ತು ಇನ್ನಿತರ ಪ್ರಕ್ರಿಯೆಗಳಲ್ಲಿ ಸತತವಾಗಿ ಹೂಡಿಕೆ ಮಾಡಿದ್ದೇವೆ” ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ