ಮಥುರಾ ಹೊತ್ತಿ ಉರಿಯುವಾಗ ಟ್ವಿಟ್ಟರ್‌ನಲ್ಲಿ ಫೋಟೋ ಅಪ್ಲೋಡ್ ಮಾಡುತ್ತಿದ್ದ ಬಿಜೆಪಿ ಸಂಸದೆ ಹೇಮಾಮಾಲಿನಿ

ಶುಕ್ರವಾರ, 3 ಜೂನ್ 2016 (14:03 IST)
ಮಥುರಾದಲ್ಲಿ ಅಕ್ರಮ ಭೂ ಒತ್ತುವರಿ ತೆರವು ಪ್ರಕರಣದಲ್ಲಿ ಹಿಂಸಾಚಾರ ಭುಗಿಲೆದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 22 ಮಂದಿ ಸಾವನ್ನಪ್ಪಿದ ಘಟನೆ ನಡೆಯುತ್ತಿರುವ ಸಂದರ್ಭದಲ್ಲಿ ಮಥುರಾ ಸಂಸದೆ ಹೇಮಾಮಾಲಿನಿ ತನ್ನ ಶೂಟಿಂಗ್ ಚಿತ್ರಗಳನ್ನು ಅಪ್ಲೋಡ್ ಮಾಡುತ್ತಿರುವುದು ಬಹಿರಂಗವಾಗಿದೆ.
 
ನಂತರ, ಸುದ್ದಿ ಬಹಿರಂಗವಾಗುತ್ತಿದ್ದಂತೆ ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಅಪ್ಲೋಡ್ ಮಾಡಿರುವ ಚಿತ್ರಗಳನ್ನು ಡಿಲಿಟ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮಥುರಾದಲ್ಲಿ ನಡೆದ ಬೆಳವಣಿಗೆಗಳಿಂದ ತೀವ್ರ ಅಸಮಧಾನವಾಗಿದೆ. ಮಥುರಾ ಜನತೆ ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. 
 
ನಗರದ ಜವಾಹರಬಾಗ್‌ನಲ್ಲಿ ಭೂ ಕಬಳಿಕೆದಾರರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ಘಟನೆಯಲ್ಲಿ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ 24 ಮಂದಿ ಹತ್ಯೆಯಾಗಿದ್ದಾರೆ. 
 
ಏತನ್ಮಧ್ಯೆ, ಬಿಜೆಪಿ ಪಕ್ಷ ಸಂಸದೆ ಹೇಮಾಮಾಲಿನಿ ರಕ್ಷಣೆಗೆ ಬಂದಿದ್ದು, ಅವರು ಮೊದಲೇ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿಕೆ ನೀಡಿದೆ.
 
ಬಿಜೆಪಿ ಸಂಸದೆ ಹೇಮಾಮಾಲಿನಿ ಮಥುರಾಗೆ ತೆರಳಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಅವರಿಗೆ ತುಂಬಾ ಆತಂಕವಾಗಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ತಿಳಿಸಿದ್ದಾರೆ. 
 
ರಾಜ್ಯದಲ್ಲಿನ ಕಾನೂನು ವ್ಯವಸ್ಥೆ ರಾಜ್ಯ ಸರಕಾರದ ಹೊಣೆಯಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಯಾಕೆ ಹಿಂಸಾಚಾರ ನಡೆದ ಸ್ಥಳಕ್ಕೆ ಆಗಮಿಸಿಲ್ಲ ಎಂದು ಸಂಬಿತ್ ಪಾತ್ರಾ ತರಾಟೆಗೆ ತೆಗೆದುಕೊಂಡರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ