ರಾಹುಲ್ ಗಾಂಧಿ ಮದುವೆ ಯಾವಾಗ?: ಸೋನಿಯಾ ಕೊಟ್ಟ ಉತ್ತರವಾದ್ರು ಏನು?

ಸೋಮವಾರ, 31 ಜುಲೈ 2023 (09:35 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾರ್ವಜನಿಕರನ್ನ ತಲುಪುವ ಪ್ರಯತ್ನದಲ್ಲಿ ಹರಿಯಾಣದ ಸೋನಿಪತ್ನ ರೈತ ಮಹಿಳೆಯರೊಂದಿಗೆ ಸಂವಾದದಲ್ಲಿ ನಿರತರಾಗಿದ್ದಾರೆ. ಅವರೊಂದಿಗಿನ ಸಂಭಾಷಣೆಯ ವೀಡಿಯೊಗಳನ್ನು ಟ್ವಿಟರ್ನಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಮಹಿಳೆಯರ ಹೊಲಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸೋನಿಯಾ ಗಾಂಧಿ, ತಮ್ಮ ನಿವಾಸದಲ್ಲಿ ರೈತ ಮಹಿಳೆಯರಿಗೆ ಭೋಜನಕೂಟ ಏರ್ಪಡಿಸುವ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ರೈತ ಮಹಿಳೆಯರನ್ನ ಪ್ರಿಯಾಂಕಾ ಗಾಂಧಿ ಮನೆಗೆ ಆಹ್ವಾನಿಸಿ, ಸೋನಿಯಾ ಗಾಂಧಿ ಜೊತೆಗೆ ಭೋಜನಕ್ಕೆ ವ್ಯವಸ್ಥೆ ಮಾಡಿದ್ದರು.

ಹೀಗೆ ಮನೆಗೆ ಬಂದ ರೈತ ಮಹಿಳೆಯರ ಪೈಕಿ ಓರ್ವ ಮಹಿಳೆ ರಾಹುಲ್ ಗಾಂಧಿ ಅವರ ಮದುವೆ ಯಾವಾಗ? ಮಾಡಲಿದ್ದೀರಿ ಎಂದು ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ