ಕಂದಮ್ಮಗಳ ರಕ್ಷಣೆ ಎಲ್ಲಿದೆ?!

ಭಾನುವಾರ, 24 ಅಕ್ಟೋಬರ್ 2021 (10:14 IST)
ನವದೆಹಲಿ : ದಿನದಿಂದ ದಿನಕ್ಕೆ ಕಾಮುಕರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಚಿಕ್ಕ ಮಕ್ಕಳನ್ನು ಕೂಡ ಮನೆಯಿಂದ ಹೊರಗೆ ಕಳುಹಿಸಲು ಹೆದರಬೇಕಾದ ಪರಿಸ್ಥಿತಿ ಎದುರಾಗಿದೆ.
ಮಹಿಳೆಯರು, ಯುವತಿಯರನ್ನು ಮಾತ್ರವಲ್ಲದೆ ಸಣ್ಣ ಮಕ್ಕಳ ಮೇಲೆ ಕೂಡ ಅತ್ಯಾಚಾರ ನಡೆಯುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ರೀತಿಯ ಆಘಾತಕಾರಿ ಘಟನೆಯೊಂದು ನಡೆದಿದ್ದು, 6 ವರ್ಷದ ಮಗುವಿನ ಮೇಲೆ 20 ವರ್ಷದ ಯುವಕನೊಬ್ಬ ಅಮಾನುಷವಾಗಿ ಅತ್ಯಾಚಾರ ನಡೆಸಿದ್ದಾನೆ. ಆತನ ಮುಖ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ.
ದೆಹಲಿಯ ರಂಜಿತ್ ನಗರ ಪ್ರದೇಶದಲ್ಲಿ 20 ವರ್ಷದ ವ್ಯಕ್ತಿಯೊಬ್ಬ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಚಿಂತಾಜನಕ ಸ್ಥಿತಿಯಲ್ಲಿರುವ ಬಾಲಕಿಗೆ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ. ನಿನ್ನೆ ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಆರೋಪಿ ಆಕೆಗೆ ಆಮಿಷ ಒಡ್ಡಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ