ಈ ಬಾರಿ ಮುಖ್ಯ ಆರ್ಥಿಕ ಸಲಹೆಗಾರರು ಯಾರು?

ಶನಿವಾರ, 29 ಜನವರಿ 2022 (07:21 IST)
ನವದೆಹಲಿ : ಕೇಂದ್ರ ಸರ್ಕಾರ ಮುಖ್ಯ ಆರ್ಥಿಕ ಸಲಹೆಗಾರ ಹುದ್ದೆಗೆ ಆರ್ಥಿಕ ತಜ್ಞ ವಿ.ಅನಂತ ನಾಗೇಶ್ವರನ್ ಅವರನ್ನು ಶುಕ್ರವಾರ ನೇಮಕ ಮಾಡಿದೆ.
 
ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆ ಇದ್ದು, ಕೆಲವೇ ದಿನಗಳ ಮುಂಚಿತವಾಗಿ ಕೇಂದ್ರವು ನಾಗೇಶ್ವರನ್ರನ್ನು ನೇಮಿಸಿದೆ. 

ನಾಗೇಶ್ವರನ್ ಅವರು ಭಾರತ ಮತ್ತು ಸಿಂಗಾಪುರದಲ್ಲಿ ಹಲವಾರು ಶಾಲೆಗಳು ಮತ್ತು ಮ್ಯಾನೇಜ್ಮೆಂಟ್ ಇನ್‌ಸ್ಟಿಟ್ಯೂಟ್‌ಳಲ್ಲಿ ಬೋಧನೆ ಮಾಡಿದ್ದಾರೆ.

ಇದಕ್ಕೂ ಮೊದಲು ಮುಖ್ಯ ಆರ್ಥಿಕ ತಜ್ಞರಾಗಿದ್ದ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ಅ.8 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ