ಎರಡು ಬಾರಿ ಸೋತರೂ ಮೂರನೇ ಬಾರಿ ಮೋದಿ ಎದುರು ಕಣಕ್ಕಿಳಿಯಲಿರುವ ಅಜಯ್ ರಾಯ್

Krishnaveni K

ಭಾನುವಾರ, 24 ಮಾರ್ಚ್ 2024 (16:50 IST)
Photo Courtesy: Twitter
ವಾರಣಾಸಿ: ಈ ಬಾರಿಯೂ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್ ಅಜಯ್ ರಾಯ್ ಅವರನ್ನು ಕಣಕ್ಕಿಳಿಸಿದೆ. ಅಷ್ಟಕ್ಕೂ ಈ ಅಜಯ್ ರಾಯ್ ಯಾರು ಎಂದು ನೋಡೋಣ.

2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲೂ ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಕಾಂಗ್ರೆಸ್ ಅಜಯ್ ರಾಯ್ ರನ್ನು ಕಣಕ್ಕಿಳಿಸಿತ್ತು. ಆದರೆ ಈ ಎರಡೂ ಬಾರಿಯೂ ಅವರು ಹೀನಾಯ ಸೋಲು ಅನುಭವಿಸಿದ್ದರು. ಹೀಗಿದ್ದರೂ ಮತ್ತೆ ಮೂರನೇ ಬಾರಿಗೆ ಕಾಂಗ್ರೆಸ್ ಅಜಯ್ ಗೇ ಮೋದಿ ವಿರುದ್ಧ ಸ್ಪರ್ಧಿಸಲು ಟಿಕೆಟ್ ನೀಡಿದೆ.

ವಿಶೇಷವೆಂದರೆ ಈ ಅಜಯ್ ರಾಯ್ ಕೂಡಾ ಆರ್ ಎಸ್ಎಸ್ ಹಿನ್ನಲೆಯಿಂದ ಬಂದವರೇ. ಎಬಿವಿಪಿ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಅಜಯ್ ಬಳಿಕ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ದಿಸಿದ್ದರು. ಬಳಿಕ ಲೋಕಸಭೆ ಟಿಕೆಟ್ ಸಿಗಲಿಲ್ಲವೆಂದು ಸಮಾಜವಾದಿ ಪಾರ್ಟಿ ಸೇರಿಕೊಂಡಿದ್ದರು.  2012 ರಲ್ಲಿ ಕಾಂಗ್ರೆಸ್ ಸೇರಿಕೊಂಡಿದ್ದ ಅಜಯ್ ಉತ್ತರ ಪ್ರದೇಶ ವಿಧಾನಸಭೆಗೆ ಸ್ಪರ್ಧಿಸಿ ಗೆದ್ದಿದ್ದರು.

2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸಿ ಹೀನಾಯ ಸೋಲು ಕಂಡಿದ್ದರು. ಇದೀಗ ಅಜಯ್ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ‍್ಯಕ್ಷರಾಗಿದ್ದಾರೆ. ಮೂರನೇ ಬಾರಿಗೆ ಮೋದಿ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ