ಭಾರತದ ಮುಂದಿನ ರಾಷ್ಟ್ರಪತಿ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ನಾಳೆ ಸಿಗಲಿದೆ ಉತ್ತರ

ಸೋಮವಾರ, 19 ಜೂನ್ 2017 (09:48 IST)
ನವದೆಹಲಿ: ಭಾರತದ ಮುಂದಿನ ರಾಷ್ಟ್ರಪತಿ ಯಾರಾಗಬಹುದು? ಈ ಪ್ರಶ್ನೆಗೆ ಉತ್ತರ ತಿಳಿಯಬೇಕಾದರೆ ನಾಳೆ ಘೋಷಣೆಯಾಗಲಿರುವ ಅಭ್ಯರ್ಥಿಯ ಹೆಸರು ಯಾರೆಂದು ತಿಳಿಯಬೇಕಾಗಿದೆ.

 
ಎಲ್ಲವೂ ಅಂದುಕೊಂಡಂತೆ ಆದರೆ, ನಾಳೆ ಅಂದರೆ ಮಂಗಳವಾರ ರಾಷ್ಟ್ರಪತಿ ಅಭ್ಯರ್ಥಿಯ ಘೋಷಣೆಯಾಗಲಿದೆ. ನಾಳೆ ಆಡಳಿತಾರೂಢ ಬಿಜೆಪಿ ಸಂಸದೀಯ ಸಭೆ ನಡೆಯಲಿದ್ದು, ಇದರ ನಂತರ ಅಭ್ಯರ್ಥಿಯ ಘೋಷಣೆಯಾಗುವ ನಿರೀಕ್ಷೆಯಿದೆ.

ಒಂದು ವೇಳೆ ವಿರೋಧ ಪಕ್ಷ ಕಾಂಗ್ರೆಸ್ ಸೇರಿದಂತೆ ಇತರರೂ ಎನ್ ಡಿಎ ಅಭ್ಯರ್ಥಿಯನ್ನು ಬೆಂಬಲಿಸಿದರೆ ರಾಷ್ಟ್ರಪತಿ ಯಾರಾಗಬಹುದು ಎಂಬ ಪ್ರಶ್ನೆಗೆ ನಾಳೆಯೇ ಸ್ಪಷ್ಟ ಉತ್ತರ ದೊರಕಬಹುದು.

ಜನವರಿ ಅಂತ್ಯದಲ್ಲಿ ಪ್ರಧಾನಿ ಮೋದಿ ಅಮೆರಿಕಾ ಪ್ರವಾಸ ಕೈಗೊಳ್ಳಲಿರುವುದರಿಂದ ಜನವರಿ 23 ರಂದೇ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಹೀಗಾಗಿ ನಾಳೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ