ವಯನಾಡ್‌ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಕಣಕ್ಕೆ ಇಳಿದ ಯುವ ಎಂಜಿನಿಯರ್ ಯಾರು

Sampriya

ಭಾನುವಾರ, 20 ಅಕ್ಟೋಬರ್ 2024 (10:38 IST)
Photo Courtesy X
ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಅವರ ಸಹೋದರಿ ಪ್ರಿಯಾಂಕಾ ವಾದ್ರಾ ಕಣಕ್ಕೆ ಇಳಿದಿದ್ದು, ಅವರ ವಿರುದ್ಧ ಯುವ ಎಂಜಿನಿಯರ್‌ರೊಬ್ಬರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

36 ವರ್ಷದ ನವ್ಯಾ ಹರಿದಾಸ್ ಅವರು ಮೆಕ್ಯಾನಿಕಲ್ ಎಂಜಿನಿಯರ್ ಪದವಿ ಓದಿದ್ದು, ಕ್ಯಾಲಿಕಟ್ ವಿಶ್ವವಿದ್ಯಾಲಯದ ಕೆಎಂಸಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ.

ಸದ್ಯ ಅವರು ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ ಕೌನ್ಸಿಲರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಹಿರಿಯ ನಾಯಕ ಸತ್ಯನ್ ಮೊಕೇರಿ ಅವರನ್ನು ವಯನಾಡ್ ಲೋಕಸಭಾ ಉಪಚುನಾವಣೆಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅಭ್ಯರ್ಥಿಯಾಗಿ ಹೆಸರಿಸಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ವಯನಾಡ್‌ ಮತ್ತು ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಈ ಹಿನ್ನೆಲೆಯಲ್ಲಿ ವಯನಾಡ್‌ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  ವಯನಾಡ್‌ನಲ್ಲಿ ರಾಹುಲ್‌ ಗಾಂಧಿ 6,47,445 ಮತಗಳನ್ನು ಪಡೆದು 3,64,445 ಮತಗಳ ಅಂತರದಿಂದ ಜಯಗಳಿಸಿದ್ದರು. ಸಮೀಪದ ಸಿಪಿಐ ಅಭ್ಯರ್ಥಿ ಅನ್ನಿ ರಾಜಾ 2,83,023 ಮತಗಳನ್ನು ಪಡೆದರೆ ಬಿಜೆಪಿಯ ಸುರೇಂದ್ರನ್‌ 1,41,045 ಮತಗಳನ್ನು ಗಳಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ