ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕುಕ್ಕೆ ಸುಬ್ರಮಣ್ಯದಲ್ಲಿ ಸರ್ಪ ಸಂಸ್ಕಾರ ರದ್ದುಗೊಳಿಸಿದ್ದೇಕೆ?
ಮಂಗಳವಾರ, 20 ಫೆಬ್ರವರಿ 2018 (20:44 IST)
ಕರಾವಳಿ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಕುಕ್ಕೆ ಸುಬ್ರಮಣ್ಯದಲ್ಲಿ ನಡೆಸಲುದ್ದೇಶಿಸಿದ್ದ ಸರ್ಪ ಸಂಸ್ಕಾರ ಸೇವೆಯನ್ನು ರದ್ದುಗೊಳಿಸಿದ್ದಾರೆ.
ಅದರ ಬದಲು ದೇವಾಲಯಕ್ಕೆ ಭೇಟಿ ನೀಡಿ ಕೇವಲ ಸುಬ್ರಮಣ್ಯ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಇದಕ್ಕೆ ಕಾರಣ ಅಮಿತ್ ಶಾ ಅನಾರೋಗ್ಯ.
ನಿನ್ನೆಯಿಂದ ತೀವ್ರ ಜ್ವರದಿಂದ ಬಳಲುತ್ತಿರುವ ಅಮಿತ್ ಶಾ ಇಂದು ಸರ್ಪ ಸಂಸ್ಕಾರ ಸೇವೆ ಮಾಡಲು ವ್ರತದಲ್ಲಿರುವ ಸ್ಥಿತಿಯಲ್ಲಿಲ್ಲದ ಕಾರಣ ದಿಡೀರ್ ಕಾರ್ಯಕ್ರಮ ರದ್ದಾಗಿದೆ.
ವಿದ್ವತ್ ಪ್ರಕರಣ: ಬಾಯ್ತಪ್ಪಿ ಬಂದ ಮಾತು ಒಪ್ಪಿಕೊಂಡ ಅಮಿತ್ ಶಾ
ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ಮಲಪಾಡ್ ನಿಂದ ಹಲ್ಲೆಗೊಳಗಾದ ವಿದ್ವತ್ ಬಿಜೆಪಿ ಕಾರ್ಯಕರ್ತ ಎಂದು ಬಾಯ್ತಪ್ಪಿ ಹೇಳಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇದೀಗ ತಪ್ಪೊಪ್ಪಿಕೊಂಡಿದ್ದಾರೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಅದಕ್ಕೆ ಉದಾಹರಣೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಮ್ಮ ಕಾರ್ಯಕರ್ತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಅಮಿತ್ ಶಾ ಸುರತ್ಕಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದರು.
ಆದರೆ ವಿದ್ವತ್ ಬಿಜೆಪಿ ಕಾರ್ಯಕರ್ತನಲ್ಲ ಎಂಬ ವಿಚಾರ ಅರಿವಿಗೆ ಬರುತ್ತಿದ್ದಂತೆ ತಮ್ಮ ತಪ್ಪು ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ. ವಿದ್ವತ್ ಬಿಜೆಪಿ ಕಾರ್ಯಕರ್ತನಲ್ಲ. ಆದರೆ ನಾನು ತಪ್ಪು ಹೇಳಿದ್ದಕ್ಕಾದರೂ ಈ ವಿಚಾರ ಚರ್ಚೆಗೆ ಬಂತು ಎಂದು ಅಮಿತ್ ಶಾ ಹೇಳಿದ್ದಾರೆ.