ರೇಣುಕಾಚಾರ್ಯ ವಿರುದ್ಧ ಸಿಎಂ ಗರಂ ಆಗಿದ್ದೇಕೆ?

ಗುರುವಾರ, 22 ಆಗಸ್ಟ್ 2019 (10:12 IST)
ಬೆಂಗಳೂರು : ಸಚಿವ ಸ್ಥಾನ ವಂಚಿತ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ.
ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಶಾಸಕ ಎಂ.ಪಿ. ರೇಣುಕಾಚಾರ್ಯ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಮಾತನ್ನಾಡಿದ್ದರು. ಅಲ್ಲದೇ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.


ಇದಕ್ಕೆ ಕೋಪಗೊಂಡ ಸಿಎಂ ಯಡಿಯೂರಪ್ಪ, ‘ಬೇರೆಯವರನ್ನು ಸಮಾಧಾನ ಪಡಿಸಬೇಕು. ಅಸಮಾಧಾನಿತರನ್ನು ಸಮಾಧಾನಪಡಿಸಬೇಕಾಗಿರುವ ನೀನೇ ಹೀಗೆ ಮಾಡಿದರೆ ಹೇಗೆ? ನೀನೇ ಮಾಧ್ಯಮಗಳಿಗೆ ಹೇಳಿಕೆ ನೀಡಿದರೆ ಹೇಗೆ ?’ಎಂದು ಪ್ರಶ್ನಿಸಿದ್ದಾರೆ.ಇದಕ್ಕೆ ಮಾತನಾಡದೆ ಸುಮ್ಮನಾದ ರೇಣುಕಾಚಾರ್ಯ, ಸುಮ್ಮನೆ ನನ್ನ ಹೆಸರು ತಂದಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ