ಕೊಲ್ಕತ್ತಾ : ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ವಿರುದ್ಧ ಸತತವಾಗಿ ವಾಗ್ದಾಳಿ ನಡೆಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದೀಗ ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಪಶ್ಚಿಮ ಬಂಗಾಳದ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಸಮಯದಲ್ಲಿ ಅಸನ್ಸೋಲ್ ಲೋಕಸಭಾ ಕ್ಷೇತ್ರ ಹಾಗೂ ಬ್ಯಾಲಿಗುಂಗೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಿಗದಿಪಡಿಸಿರುವುದಕ್ಕಾಗಿ ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕಾರಣದಿಂದಾಗಿ ಪರೀಕ್ಷೆಗಳನ್ನು ಮರುಹೊಂದಿಸಬೇಕಾಗಿದೆ ಎಂದು ಅವರು ಆಗ್ರಹಿಸಿದ್ದಾರೆ.
ಚುನಾವಣಾ ಆಯೋಗವು ಬಿಜೆಪಿಯ ಆಜ್ಞೆಯಂತೆ ಕೆಲಸ ನಿರ್ವಹಿಸುತ್ತಿದೆ. ಹಾಗಾಗಿಯೇ ಅದು ಉಪಚುನಾವಣೆಯ ದಿನಾಂಕವನ್ನು ನಿಗದಿಪಡಿಸುವಾಗ ರಾಜ್ಯದ ಬೋರ್ಡ್ ಪರೀಕ್ಷೆಗಳನ್ನು ಪರಿಗಣಿಸಿಲ್ಲ.
ಏ.2 ಮತ್ತು ಏ.26ರ ನಡುವೆ ನಡೆಯಬೇಕಿದ್ದ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ನಡೆಯಲಿದ್ದು, ಏ.27ರಂದು ಪರೀಕ್ಷೆ ಕೊನೆಗೊಳ್ಳಲಿದೆ. ಈ ನಡುವೆ ಚುನಾವಣಾ ದಿನಾಂಕವನ್ನು ನಿಗದಿ ಮಾಡಿರುವುದು ಆಕ್ಷೇಪಾರ್ಹ ಎಂದು ಹೇಳಿದ್ದಾರೆ.