ಫಿರೋಜಾಬಾದ್ : ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ದಂಪತಿಗಳ ನಡುವೆ ಜಗಳ ಶುರುವಾಗಿದ್ದು, ಆ ವೇಳೆ 43 ವರ್ಷದ ಪತ್ನಿ ತನ್ನ ಗಂಡನನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾಳೆ.
ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರ ನಡುವೆ ಗಲಾಟೆ ನಡೆದ ಹಿನ್ನಲೆಯಲ್ಲಿ ಕೋಪಗೊಂಡ ಪತ್ನಿ ಪತಿಯನ್ನು ಶೂಟ್ ಮಾಡಿ ಕೊಂದು ತಾನು ಶೂಟ್ ಮಾಡಿಕೊಂಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಆಕೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.